Blogger
ಪವನ್ ಅಡಿಗ
On Blogger since: August 2011
Profile views: 590

My blogs

About me

GenderMale
IndustryTechnology
OccupationSystem Administrator
Locationಬೆಂಗಳೂರು, ಕರ್ನಾಟಕ, India
Introductionನನ್ನ ನಾಳೆಯ ಕುರಿತು ನನಗಲ್ಲ, ಈ ಭೂಮಿ ಯಾವುದೇ ಜೀವಿಗೂ ಪ್ರವಚಿಸಲು ಸಾಧ್ಯವಿಲ್ಲ. ಅಷ್ಟಕ್ಕೂ ಯಾವತ್ತೂ ಬಾರದ ನಾಳೆಯ ಬಗ್ಗೆ ನಂಗೇನು ಅಷ್ಟು ಕುತೂಹಲವಿಲ್ಲ. ಈ ಬದುಕು ಈ ಕ್ಷಣದ್ದು ಅಷ್ಟೇ ಎಂದು ನಂಬುವವನು ನಾನು. ನಾ ಈ ಪದವನ್ನು ಬೆರೆಯುವ ವೇಳೆ 'ಈ ಕ್ಷಣ' ಆಗಿದ್ದ ಈ ಹೊತ್ತನ್ನು ಇನ್ನೈದು ನಿಮಿಷದ ಬಳಿಕ ನಾ ತಿರುಗಿ ನೋಡಬಹುದು. ಅಂಥಹ ನನ್ನ ದೃಷ್ಟಿ ಪರದೆಯಲ್ಲಿ ಶಾಶ್ವತವಾಗಿ ಉಳಿಯುವ, ನನ್ನನ್ನು ಸದಾ ಜೀವಂತವಿರಿಸುವ ಪ್ರೇರಣೆಯಾಗಿ, ಒಂಟಿಯಾದಾಗ ದಿಕ್ಕಾಗಿ, ದುಃಖಕ್ಕೆ ಸಾಂತ್ವನವಾಗಿ, ಭಾರಕ್ಕೊಂದು ಹೆಗಲಾಗಿ, ಅತ್ತ ಕ್ಷಣವ ನಗುವಾಗಿ, ನಕ್ಕ ಕ್ಷಣ ಅಳುವಾಗಿ, ಮಳೆಯ ನಂತರ ತೊಟ್ಟಿಕ್ಕುವ ಹನಿಯಾಗಿ, ಬದುಕು ಇಷ್ಟೆಯಾ ಎಂದೆನಿಸುವ ವೇಳೆ ನೀಲಾಗಸದ ತುಂಬಾ ಕಾಮನಬಿಲ್ಲಾಗಿ ಮೂಡುವ ನನ್ನ ನೆನಪುಗಳು, ಅಂತಹ ನೆನಪುಗಳ ವ್ಯಸನಿ ನಾನು. ಆ ಕಾರಣಕ್ಕೇ ಇರಬಹುದು ನಿನ್ನೆಗಳಲ್ಲೇ ಹೆಚ್ಚು ಬದುಕುತ್ತೇನೆ. ಅಂತಹ ಒಂದಿಷ್ಟು ಬೊಗಸೆ ನೆನಪುಗಳನ್ನು ಈ ಸಂಚಿಯೊಳಗೆ ತುಂಬಿದ್ದೇನೆ.. ನನ್ನ ಬಗ್ಗೆ ನನ್ನ ಬರಹಗಳೇ ಹೆಚ್ಚು ಮಾತನಾಡುವುದರಿಂದ ಇಲ್ಲಿ ಹೇಳಲು ಹೆಚ್ಚು ಉಳಿದಿಲ್ಲ. ನಾನು ನಾನಾಗಿ ಹೆಚ್ಚು ಬದುಕುತ್ತೇನೆ. ಅದರಿಂದಲೋ ಏನೋ ನಾನು ಎಂದೂ ಸಲ್ಲದ ಈ ಬೆಳಕಿನ ಜಗದ ಬಗ್ಗೆ ತೀರದ ಅಸಹ್ಯತನವಿದೆ. ಕೋಪವಿದೆ, ಪರಿತಾಪವಿದೆ. ಆದರೇನು ? ಒಲ್ಲದೆಯೂ ನಾನು ಕೂಡ ಈ ಜಗದ ಕ್ಷುಲ್ಲಕತೆಯ ಭಾಗವಾಗಿದ್ದೇನೆ. ಅದರಿಂದಾಚೆ ಹೊರಬರಲು ಪ್ರಯತ್ನಿಸಿದಷ್ಟೂ ತೀವ್ರವಾಗಿ ನನ್ನನ್ನು ಸೆಳೆಯುತ್ತದೆ ಅದು. "ಮನಃಶಾಂತಿಯೇ ಅತ್ಯುನ್ನತ ಶ್ರೀಮಂತಿಕೆ", ಈ ಬೆಳಕಿನ ಜಗದ ತುಂಬೆಲ್ಲಾ ಯಾವುದೊ ಕರ್ಕಶ ಸಂಗೀತಕ್ಕೆ ಕಿವುಡಾದ ಮಂದಿಯ ಮಧ್ಯೆ ಈ ಸತ್ಯವನ್ನು ಕೂಗಿ ಕೂಗಿ ಹೇಳುವ ಪ್ರಯತ್ನದಲ್ಲಿದ್ದೇನೆ.. ಪ್ರೀತಿಯಿರಲಿ ಬೆಳ್ಳಿ
Google apps
Main menu