Blogger
sampadakeeya
On Blogger since: December 2010
Profile views: 3,116

My blogs

About me

Introductionಪತ್ರಕರ್ತರು ಪ್ರಶ್ನಾತೀತರೆ? ಪ್ರಶ್ನಾತೀತರೆನಿಸಿಕೊಳ್ಳಲು ಅವರಿಗಿರುವ ವಿಶೇಷ ಅರ್ಹತೆಗಳಾದರೂ ಏನು? ರಾಜಕಾರಣಿಗಳಾಗಲಿ, ಮಠಾಧೀಶರಾಗಲಿ, ಅಧಿಕಾರಿಗಳಾಗಲಿ, ನ್ಯಾಯಾಧೀಶರಾಗಲಿ, ಪತ್ರಕರ್ತರಾಗಲಿ ಪ್ರಶ್ನಾತೀತರಾಗಿಹೋದರೆ ಆಗುವ ಸಮಸ್ಯೆಗಳೇನು? ಇನ್ನುಳಿದವರನ್ನೆಲ್ಲ ಪ್ರಶ್ನಿಸಲು ಪತ್ರಕರ್ತರಿದ್ದಾರೆ ನಿಜ, ಆದರೆ ಪತ್ರಕರ್ತರನ್ನು ಪ್ರಶ್ನಿಸುವವರು ಯಾರು? ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರು ಯಾರು? ನಾವು ಸಂಪಾದಕೀಯದ ಮೂಲಕ ಪತ್ರಕರ್ತರಿಗೇ ಪ್ರಶ್ನೆಗಳನ್ನು ಕೇಳುತ್ತಿದ್ದೇವೆ. ಒಂದು ಸಣ್ಣ ಪ್ರಯತ್ನವಷ್ಟೆ ನಮ್ಮದು. ಇವತ್ತು ಮಾಧ್ಯಮ ಕ್ಷೇತ್ರವನ್ನು ರಾಡಿಯೆಬ್ಬಿಸಿರುವುದು ಭ್ರಷ್ಟಾಚಾರ ಮಾತ್ರವಲ್ಲ. ಧರ್ಮಾಂಧತೆ ಮತ್ತು ಜಾತೀಯತೆಗಳು ಮೇರೆ ಮೀರಿವೆ. ರಾಜಕಾರಣಿಗಳಿಗಿಂತ ಹೆಚ್ಚು ಜಾತೀಯತೆಯನ್ನು ಪತ್ರಕರ್ತರೇ ಪ್ರದರ್ಶಿಸುತ್ತಿದ್ದಾರೆ. ರಾಜಕಾರಣಿಗಳಿಗಾದರೋ ಎಲ್ಲ ಜಾತಿಯವರ ಓಟು ಬೇಕು. ಪತ್ರಕರ್ತರಿಗೆ ಆ ಕಷ್ಟವೂ ಇಲ್ಲವಲ್ಲ! ಒಂದಂತೂ ಸ್ಪಷ್ಟಪಡಿಸುತ್ತೇವೆ. ನಮಗೆ ಯಾರ ಮೇಲೂ ದ್ವೇಷವಿಲ್ಲ, ಒಲವೂ ಇಲ್ಲ. ನಮಗೆ ಇಂಥದ್ದು ಅಂಥದ್ದು ಅನ್ನುವ ಇಸಂಗಳು ಇಲ್ಲ. ನಮಗೆ ಸರಿ ಅಲ್ಲ ಅನ್ನಿಸಿದ್ದನ್ನು ಹೇಳುತ್ತೇವೆ, ನಾವು ಹೇಳಿದ್ದು ಸರಿಯಿಲ್ಲ ಎಂಬ ಅಭಿಪ್ರಾಯವಿರುವವರೂ ಪ್ರತಿಕ್ರಿಯೆ ನೀಡಬಹುದು. ಎಲ್ಲ ಮೀಡಿಯಾ ಕಚೇರಿಗಳ ಟೇಬಲ್ಲುಗಳಲ್ಲೂ ನಾವಿದ್ದೇವೆ. ಸತ್ಯ ಹೇಳುತ್ತೇವೆ ಎಂಬ ವಿಶ್ವಾಸದಲ್ಲಿ ಸಾಕಷ್ಟು ಮಾಹಿತಿಗಳನ್ನು ಇ-ಮೇಲ್ ಮೂಲಕವೂ ಅಪರಿಚಿತ ಗೆಳೆಯರು ಕಳುಹಿಸುತ್ತಿದ್ದಾರೆ. ಇದು ಒಂದು ಸಣ್ಣ ಆಂದೋಲನ. ಮಾಧ್ಯಮರಂಗ ಪರಿಶುದ್ಧವಾಗಿರಬೇಕು ಎಂದು ಬಯಸುವವರೆಲ್ಲ ಇದರಲ್ಲಿ ಪಾಲ್ಗೊಳ್ಳಬಹುದು.
Google apps
Main menu