ರಾಧಾಕೃಷ್ಣ ಎಸ್.ಭಡ್ತಿ

My blogs

About me

Gender Male
Industry Publishing
Occupation Journalist
Location Bangalore, Karnataka, India
Introduction ನಾನೆಂದರೆ... ಮಲೆನಾಡಿನ ಸೆರಗಿನಲ್ಲಿರುವ ಸಾಗರ ತಾಲೂಕಿನ ಗೀಜಗಾರು ಎಂಬ ಕಗ್ಗಾಡಿನ ಅಜ್ಜನಮನೆಯಲ್ಲಿ ಹುಟ್ಟಿದವ.ಕರ್ಕಿಕೊಪ್ಪದಲ್ಲಿ ಮನೆ. ಅಲ್ಲೇ ಓದಿದ್ದು, ಕಿತಾಪತಿಗಳನ್ನೆಲ್ಲ ಮಾಡಿದ್ದು. ಮೊದಲಿನಿಂದಲೂ ಶಾಸ್ತ್ರೀಯ ಓದೆಂದರೆ ಅಷ್ಟಕ್ಕಷ್ಟೇ. ಹೇಗೋ ಬಿಕಾಂನ ಕೊನೆಯ ವರ್ಷ ತಲುಪಿ, ಹೊರಳಿದ್ದು ಪತ್ರಿಕೋದ್ಯಮದ ಕಡೆಗೆ. ಅಭ್ಯಾಗತ ನನ್ನೊಳಗಿನ ಕುಲುಮೆಯಲ್ಲಿ ಅರಳಿದ ಪತ್ರಿಕೆ. ವರ್ಷದಲ್ಲಿ ಸ್ವಂತ ಪತ್ರಿಕೆಯೆಂಬ ಒಲೆಗೆ ಕೈಹಾಕಿ ಸುಟ್ಟುಕೊಂಡು, ಶಿವಮೊಗ್ಗದ ಜನವಾರ್ತೆಯಲ್ಲಿ ಜಂಟಿ ಸಂಪಾದಕನಾದೆ. ಆಗಲೇ ಪತ್ರಿಕೋದ್ಯಮ ಡಿಪ್ಲೊಮೊ ಮುಗಿಸಿದ್ದು. ಅಲ್ಲಿಂದ ಹೊಸದಿಗಂತ, ಸಂಯುಕ್ತ ಕರ್ನಾಟಕ ನನ್ನ ಕೈ ಹಿಡಿದು ನಡೆಸಿದವು. ಅಲ್ಲಿಂದ ಸೇರಿದ್ದು ವಿಜಯ ಕರ್ನಾಟಕಕ್ಕೆ. ಹಲವು ಹೊಣೆಗಾರಿಕೆಗಳ ನಂತರ ಕನ್ನಡಕ್ಕೆ ತೀರಾ ಹೊಸದಾದ ದೈನಂದಿನ ಪುರವಣಿ ‘ಲವಲವಿಕೆ’ಯ ಮುನ್ನಡೆಸುವ ಅವಕಾಶ. ಸುದ್ದಿ, ಲೇಖನಗಳಿಗೆ ಕತ್ತರಿ ಪ್ರಯೋಗಿಸುವ ಏಕತಾನತೆಯನ್ನು ಹೊಡೆದೋಡಿಸುತ್ತಿದ್ದುದು ನೀರ ಕುರಿತಾದ ಅಧ್ಯಯನ. ಅದರ ಫಲವಾಗಿ ಸತತ ಆರು ವರ್ಷ ‘ವಿಕ’ದಲ್ಲಿ ಪ್ರತಿ ಶುಕ್ರವಾರ ‘ನೀರು ನೆರಳಿಗೆ’ ಕೊರತೆ ಆಗಿರಲಿಲ್ಲ. ಇದಕ್ಕಾಗಿ ರಾಜ್ಯ ಸರಕಾರ, ಸಿಡಿಎಲ್, ಇಂದೋರ್ ವಿಶ್ವವಿದ್ಯಾಲಯ, ಬಿಎಲ್‌ಡಿಇ ಯಂಥ ಸಂಸ್ಥೆಗಳು ಅಭಿಮಾನವಿಟ್ಟು ಪ್ರಶಸ್ತಿ ನೀಡಿ, ಹೊಣೆಗಾರಿಕೆಯನ್ನು ಎಚ್ಚರಿಸಿವೆ. ನೀರ ಬಗ್ಗೆ ಗೀಚಿದ್ದನ್ನೆಲ್ಲ ಗೆಳೆಯರೊಂದಿಗೆ ಹಂಚಿಕೊಳ್ಳಲು ‘ನೀರ್ ಸಾಧಕ್’ ಜತೆಗೂಡಿದ್ದ. ಈಗ ಎಲ್ಲ ಬಿಟ್ಟು ಓದುಗರ ಜತೆಗೆ ನಿಂತಿರುವಾಗ ‘ಗಿಂಡಿಮಾಣಿ’ ಕೈ ಹಿಡಿದಿದ್ದಾನೆ...ಇನ್ನೇನು ಹೇಳಲಿ ? ನಾನೆಂದರೆ ಇಷ್ಟೇ.
Interests ಬರವಣಿಗೆ ವೃತ್ತಿಯೂ ಹೌದು, ಪ್ರವೃತ್ತಿ ಸಹ. ಅಕ್ಷರದಿಂದಲೇ ಅನ್ನ ಗಳಿಸಿಕೊಂಡವ. ಉಳಿದಂತೆ ಹುಟ್ಟಿ ಬೆಳೆದ ವಾತಾವರಣದಲ್ಲಿ ಹಾಸು ಹೊಕ್ಕಾಗಿರುವ ಯಕ್ಷಗಾನ ನೆಚ್ಚಿನ ವಿಷಯ. ಓದಿಲ್ಲದೇ ಬದುಕು ಪೂರ್ಣವಾಗದೆಂಬುದು ನಂಬಿಕೆ. ಪರಿಸರ ಅಧ್ಯಯನ ಗೀಳು. ಅದರಲ್ಲೂ ನೀರಿನ ದಾಹ ಹೆಚ್ಚು.